: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ ://.. ನಲ್ಲಿ ವೀಕ್ಷಿಸಬಹುದು. ರಾಜ್ಯದ 458 ಕೇಂದ್ರಗಳಲ್ಲಿ ಜೂನ್‌ 12ರಿಂದ 19ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ರಾಜ್ಯದ 1,11,781 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 46,270 ಮಂದಿ ಉತ್ತೀರ್ಣರಾಗಿದ್ದಾರೆ 2022–23ನೇ ಸಾಲಿನಲ್ಲಿ ಪರೀಕ್ಷೆ ಬರೆದಿದ್ದ 8,35,102 ವಿದ್ಯಾರ್ಥಿಗಳಲ್ಲಿ 1,34,483 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.