ನೀಟ್‌: ನೋಂದಣಿ ಇಂದು ಮುಕ್ತಾಯ ಬೆಂಗಳೂರು: ನೀಟ್‌ ಅರ್ಹತೆ ಪಡೆದ ಅಭ್ಯರ್ಥಿಗಳು ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಗಾಗಿ ನೋಂದಣಿ ಮಾಡಿಕೊಳ್ಳಲು ಆ. 2ರ ರಾತ್ರಿ 8ರವರೆಗೆ ಅಂತಿಮ ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ ಮೂಲಕ ಇದುವರೆಗೂ ನೋಂದಣಿ ಮಾಡದೆ ಇರುವ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಶುಲ್ಕ ಪಾವತಿಸಬೇಕು. ಅರ್ಜಿ ಸಲ್ಲಿಸಿದವರು ಆ 3ರಂದು ಬೆಳಿಗ್ಗೆ 10ಕ್ಕೆ ದಾಖಲೆಗಳ ಪರಿಶೀಲನೆಗಾಗಿ ಪ್ರಾಧಿಕಾರದ ಕಚೇರಿಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನೋಂದಣಿ ಮಾಡಿಕೊಳ್ಳಲು ಆ.3ರ ಸಂಜೆ 6ರವರೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್‌ ://... ಸಂಪರ್ಕಿಸಬಹುದು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.