ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ ದೇವನಹಳ್ಳಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಸ್ತಕ ಸಾಲಿನ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್‌ಡ್ಬ್ಲೂ, ಎಂಎಸ್‌ಡ್ಬ್ಲೂ, ಎಂಸಿಎ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭಿಸಲಾಗಿದೆ. ಇದರ ಜೊತೆಗೆ ಈ ಹಿಂದೆ ಪ್ರವೇಶಾತಿ ನೀಡುತ್ತಿದ್ದ ಕೋರ್ಸ್‌ಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಬಿ.ಎ, ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ, ಎಂ.ಎಸ್ಸಿ., ಎಂ.ಬಿ.ಎ., ಎಂ.ಲಿಬ್.ಐ.ಎಸ್ಸಿ, ಪಿ.ಜಿ. ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಯು.ಜಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಅಂತಿಮ ದಿನ. ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ ... ನಲ್ಲಿ ವಿವರ ಲಭ್ಯವಿರುತ್ತದೆ. ಮಾಹಿತಿಗೆ ದೂ.080-26603664, ಮೊ.98449-65515 ಅನ್ನು ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.