ಕುಂದಾಪುರ | ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಕುಂದಾಪುರ: ನಾಡಾದಲ್ಲಿನ ರೆ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿಗೆ ವಿವಿಧ ಕೋರ್ಸ್‌ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ದೆಹಲಿಯ ರಾಷ್ಟ್ರೀಯ ವೃತ್ತಿಶಿಕ್ಷಣ ಮಂಡಳಿಯಿಂದ ಸಂಯೋಜನೆ ಪಡೆದುಕೊಂಡಿರುವ ಒಂದು ವರ್ಷದ ಮೆಕ್ಯಾನಿಕ್ ಡೀಸೆಲ್(ಆಟೋಮೊಬೈಲ್), ಎರಡು ವರ್ಷದ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಹಾಗೂ ಎಲೆಕ್ಟ್ರೀಷಿಯನ್ ಕೋರ್ಸ್‌ಗಳಿಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಸರ್ಕಾರದ ಮೀಸಲಾತಿಯಂತೆ ಅಭ್ಯರ್ಥಿಗಳಿಗೆ ಪ್ರವೇಶಾವಕಾಶ ನೀಡಲಾಗುವುದು. ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರಕುವ ವಿದ್ಯಾರ್ಥಿವೇತನ, ಖಾಸಗಿ ವಿದ್ಯಾರ್ಥಿವೇತನ ಪಡೆದುಕೊಳ್ಳಲು, ಸರ್ಕಾರಿ ಹಾಗೂ ಖಾಸಗಿ ಬಸ್ಸು ಪಾಸುಗಳನ್ನು ಪಡೆದುಕೊಳ್ಳಲು ಸಂಸ್ಥೆಯಿಂದ ಮಾರ್ಗದರ್ಶನ ನೀಡಲಾಗುವುದು. ಒಂದು, ಎರಡು ವರ್ಷಗಳ ತರಬೇತಿಯನ್ನು ಯಶಸ್ವಿಯಾಗಿ ಪೂರೈಸುವ ಅಭ್ಯರ್ಥಿಗಳಿಗೆ ಪ್ರಸಿದ್ಧ ಕಂಪೆನಿಗಳ ಒಡಂಬಡಿಕೆಯೊಂದಿಗೆ ಕ್ಯಾಂಪಸ್‌ ಸಂದರ್ಶನಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.