: ಶುಲ್ಕ ಪಾವತಿಗೆ 29 ಕಡೇ ದಿನ ಬೆಂಗಳೂರು: ರಾಜ್ಯದಲ್ಲಿ ಮಾರ್ಚ್‌, ಏಪ್ರಿಲ್‌ನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶುಲ್ಕ ಪಾವತಿಸಲು ಡಿ.29ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಜಾಲತಾಣದ ಲಾಗಿನ್‌ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್‌ ಮುದ್ರಿಸಿಕೊಳ್ಳಲು ಡಿ.21ರಿಂದ 27ರವರೆಗೆ ಸಮಯ ನಿಗದಿ ಮಾಡಲಾಗಿದೆ. ಚಲನ್ ಮುದ್ರಿಸಿಕೊಂಡ ನಂತರ ಬ್ಯಾಂಕ್‌ಗೆ ಪರೀಕ್ಷಾ ಶುಲ್ಕ ಜಮೆ ಮಾಡಬೇಕು. ಎಲ್ಲ ದಾಖಲೆಗಳನ್ನು ಮಂಡಳಿಗೆ ಜ. 6ರ ಒಳಗೆ ಸಲ್ಲಿಸಬೇಕು ಎಂದು ಮಂಡಳಿಯ ಪರೀಕ್ಷೆಗಳ ವಿಭಾಗದ ನಿರ್ದೇಶಕ ಎಚ್‌.ಎನ್‌.ಗೋಪಾಲಕೃಷ್ಣನ್ ಮಾಹಿತಿ ನೀಡಿದ್ದಾರೆ. ಪರೀಕ್ಷೆಗಳು ಮಾರ್ಚ್‌ 31ರಿಂದ ಏಪ್ರಿಲ್‌ 15ರವರೆಗೆ ನಡೆಯಲಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.