ಮೇ 20, 21ಕ್ಕೆ ಸಿಇಟಿ ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಕೆಸಿಇಟಿ–2023) ಮೇ 20 ಹಾಗೂ 21ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ. ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೂರ್ಣ ವಿವರಗಳನ್ನು ಶೀಘ್ರ ಪ್ರಕಟಿಸಲಾಗುವುದು. ಹೊರನಾಡು- ಗಡಿನಾಡು ಕಡ್ಡಾಯ ಕನ್ನಡ ಪರೀಕ್ಷೆ ಮೇ 22ರಂದು ನಡೆಯಲಿದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.