ಇಲ್ಲಿದೆ ವಿದ್ಯಾರ್ಥಿ ವೇತನದ ಮಾಹಿತಿ... ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ಸ್ಕಾಲರ್‌ಶಿಪ್ ಪ್ರೋಗ್ರಾಮ್ ‘ಕೋವಿಡ್‌’ನಿಂದ ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ನೆರವಾಗುವುದಕ್ಕಾಗಿಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ಈ ಸ್ಕಾಲರ್‌ಷಿಪ್‌ ಪ್ರೋಗ್ರಾಂ ರೂಪಿಸಿದೆ. 1 ರಿಂದ 12 ನೇ ತರಗತಿ ಮತ್ತು ಪದವಿಪೂರ್ವ ತರಗತಿಗಳವರೆಗಿನ ವಿದ್ಯಾರ್ಥಿಗಳು ಈ ಸ್ಕಾಲರ್‌ಷಿಪ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ: ಕೋವಿಡ್‌ ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಈ ಸ್ಕಾಲರ್‌ಷಿಪ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 1 ರಿಂದ 12 ನೇ ತರಗತಿ ಮತ್ತು ಪದವಿಪೂರ್ವ (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್‌ಗಳಲ್ಲಿ ಓದುತ್ತಿರಬೇಕು. ಆರ್ಥಿಕ ನೆರವು: ₹ 60 ಸಾವಿರದವರೆಗೆ(ಒಂದು-ಬಾರಿಯ ವಿದ್ಯಾರ್ಥಿವೇತನ) ಅರ್ಜಿ ಸಲ್ಲಿಸಲು ಕೊನೆ ದಿನ: 10-11-2022 ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ: .b4s.//ABCC3 ಜಿಎಸ್‌ಕೆ ಸ್ಕಾಲರ್ಸ್ ಪ್ರೋಗ್ರಾಂ 2022-23 ಇದು ದೇಶದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಥವ ವರ್ಷದ ಪದವಿ (ಎಂಬಿಬಿಎಸ್‌) ಓದುತ್ತಿರುವ ವಿದ್ಯಾರ್ಥಿಗಳನ್ನು ಬೆಂಬಲಿಸುವುದಕ್ಕಾಗಿ ರೂಪಿಸಿರುವ ಸ್ಕಾಲರ್‌ಷಿಪ್‌ ಪ್ರೋಗ್ರಾಂ. ಅರ್ಹತೆ: 12 ನೇ ತರಗತಿಯಲ್ಲಿ ಕನಿಷ್ಠ ಶೇ 65 ಅಂಕಗಳನ್ನು ಪಡೆದು, ಪ್ರಥಮ ವರ್ಷದ ಎಂಬಿಬಿಎಸ್ ಓದುತ್ತಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ₹6ಲಕ್ಷ ಮೀರಿರಬಾರದು. ಆರ್ಥಿಕ ನೆರವು :ವಾರ್ಷಿಕ ₹1ಲಕ್ಷದವರೆಗೆ ಅರ್ಜಿ ಸಲ್ಲಿಸಲು ಕೊನೆ ದಿನ: 15-10-2022 ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ: .b4s.//GSKP2 ಕೃಪೆ: .buddy4study. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.