ಬಿಎಂಟಿಸಿ: 2,500 ನಿರ್ವಾಹಕರ ಹುದ್ದೆ ಭರ್ತಿಗೆ ಅರ್ಜಿ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ (ಜಿಟಿಟಿಸಿ) ಖಾಲಿ ಇರುವ‌ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ‌ ಹೊರಡಿಸಿದೆ. ಜಿಟಿಟಿಸಿಯ 76 ಹಾಗೂ ಬಿಎಂಟಿಸಿಯ 2,500 ನಿರ್ವಾಹಕ ಹುದ್ದೆಗಳಿಗೆ ಏ. 19ರಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 18 ಕೊನೆ ದಿನ. ವಿವರಗಳಿಗೆ ಕೆಇಎ‌ ವೆಬ್‌ಸೈಟ್‌ ://.. ಸಂಪರ್ಕಿಸಬಹುದು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.