ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಸಲು ಮೇ 4 ಕಡೇ ದಿನ ಬೆಂಗಳೂರು: ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏ.5ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಹುದ್ದೆಗಳ ನೇಮಕಾತಿಗೆ ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಿದಾಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸಲು ಏ.3ರವರೆಗೆ ಅವಕಾಶ ನೀಡಿತ್ತು. ಆದರೆ, ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿನ ತಾಂತ್ರಿಕ ದೋಷಗಳ ಕಾರಣ ಈಗ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 7ರವರೆಗೆ ಅವಕಾಶ ನೀಡಲಾಗಿದೆ. ಕೆ-ಸೆಟ್‌ ಕೀ ಉತ್ತರ ಪ್ರಕಟ: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಜ. 13ರಂದು 42 ವಿವಿಧ ವಿಷಯಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.