ಜಯದೇವ ಸಂಸ್ಥೆ: ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನ ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಾಯಂ ನಿರ್ದೇಶಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ವೈದ್ಯಕೀಯ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಅವಧಿ 2023ರ ಜು.19ಕ್ಕೆ ಪೂರ್ಣಗೊಂಡಿತ್ತು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರೂ ಆದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜುನಾಥ್ ಅವರ ಅವಧಿಯನ್ನು 6 ತಿಂಗಳು ಮುಂದುವರಿಸಿ, ಆದೇಶ ಹೊರಡಿಸಿದ್ದರು. ಈಗ ಅವಧಿ ಮುಗಿಯುತ್ತಿರುವುದರಿಂದ ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದೇ 19ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ವಿವರಕ್ಕೆ ...inಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.