ಬಿಡಿಎದಲ್ಲಿ 25 , ಸೇರಿ 101 ಹುದ್ದೆಗಳಿಗೆ ಕೆಇಎ ವತಿಯಿಂದ ಅರ್ಜಿ ಆಹ್ವಾನ ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರು (ಎಫ್‌ಡಿಎ, ಎಸ್‌ಡಿಎ) ಹುದ್ದೆಗಳ ಭರ್ತಿಗೆ ನೇಮಕಾತಿ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಒಟ್ಟು 25 ಹುದ್ದೆಗಳಿದ್ದು (ಕಲ್ಯಾಣ ಕರ್ನಾಟಕ ವೃಂದ ಸೇರಿ) ಮಾರ್ಚ್ 24 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಂದೇ ವಿವರವಾದ ಅಧಿಸೂಚನೆ ಬಿಡಲಾಗುವುದು ಎಂದು ತಿಳಿಸಿದೆ. ಲಿಖಿತ ‍ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಯಲಿದೆ. ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 76 ಹುದ್ದೆಗಳಿಗೆ ನೇಮಕಾತಿ ಪ್ರಾರಂಭಿಸಲಾಗುವುದು ಎಂದು ಕೆಇಎ ತಿಳಿಸಿದೆ. ಇದಕ್ಕೂ ಸಹ ಮಾರ್ಚ್ 24 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಂದೇ ವಿವರವಾದ ಅಧಿಸೂಚನೆ ಬಿಡಲಾಗುವುದು ಎಂದು ತಿಳಿಸಿದೆ. ಲಿಖಿತ ‍ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಯಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.