402 ಪಿಎಸ್ಐಗಳ ನೇಮಕ: ಮೇ 8ಕ್ಕೆ ಲಿಖಿತ ಪರೀಕ್ಷೆ ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 402 ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್ಐ) ಹುದ್ದೆಗಳ ನೇರ ನೇಮಕಾತಿಗೆ ಮೇ 8ರಂದು ಲಿಖಿತ ಪರೀಕ್ಷೆ ನಡೆಸಲಿದೆ. ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದವರ ಪಟ್ಟಿಯನ್ನು ಗೃಹ ಇಲಾಖೆ ಕೆಇಎಗೆ ನೀಡಿದೆ. ಪಟ್ಟಿಯಲ್ಲಿ ಹೆಸರು ಇರುವ ಅಭ್ಯರ್ಥಿಗಳಿಗೆ ಮಾತ್ರ ಲಿಖಿತ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.