ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸಿಟಿಐ ಹುದ್ದೆಗಳು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಬೆಂಗಳೂರು: ರಾಜ್ಯ ಸರ್ಕಾರದ ಹಣಕಾಸು ಸಚಿವಾಲಯದ ಅಡಿ ಕಾರ್ಯನಿರ್ವಹಿಸು ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ 15 ಹುದ್ದೆಗಳು ಮತ್ತು ಉಳಿಕೆ ಮೂಲ ವೃಂದದ 230 ಗ್ರೂಪ್ ಸಿ ವಾಣಿಜ್ಯ ತೆರಿಗೆ ಪರಿವೀಕ್ಷಕರು ( -) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಅಯೋಗವು (ಕೆಪಿಎಸ್ಸಿ) ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿತ್ತು. ಕಲ್ಯಾಣ ಕರ್ನಾಟಕ ವೃಂದದ 15 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಅಕ್ಟೋಬರ್ 3ಕ್ಕೆ ನಿಗದಿಪಡಿಸಲಾಗಿತ್ತು. ಇದೀಗ ಆಯೋಗ ಈ ದಿನಾಂಕವನ್ನು ವಿಸ್ತರಿಸಿ ಆದೇಶಿಸಿದೆ. ಕೊನೆಯ ದಿನಾಂಕವನ್ನು ಅಕ್ಟೋಬರ್ 30ಕ್ಕೆ ವಿಸ್ತರಿಸಿ ಆಯೋಗದ ಕಾರ್ಯದರ್ಶಿ ಕೆ.ಎಸ್.ಲತಾ ಕುಮಾರಿ ಆದೇಶಿಸಿದ್ದಾರೆ. ಉಳಿಕೆ ಮೂಲ ವೃಂದದ 230 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಸೆಪ್ಟೆಂಬರ್ 30ಕ್ಕೆ ನಿಗದಿಪಡಿಸಲಾಗಿತ್ತು. ಇದೀಗ ಆಯೋಗ ಈ ದಿನಾಂಕವನ್ನು ವಿಸ್ತರಿಸಿ ಅಕ್ಟೋಬರ್ 30ಕ್ಕೆ ವಿಸ್ತರಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹ 600, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹ 50 ಶುಲ್ಕ ನಿಗದಿಪಡಿಸಲಾಗಿದೆ. ಪ್ರವರ್ಗ 1, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಮೂಲಕವೂ ಶುಲ್ಕ ಪಾವತಿಸಬಹುದು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.