ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ ತಿ.ನರಸೀಪುರ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ತಾಲ್ಲೂಕು ಬಿಆರ್‌ಸಿ ಕೇಂದ್ರದಲ್ಲಿ ಗೌರವ ಸಂಭಾವನೆಯಡಿ ಕರ್ತವ್ಯ ನಿರ್ವಹಿಸಲು ಫಿಜಿಯೋಥೆರಪಿಸ್ಟ್ ಹಾಗೂ ಆಯಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಎರಡು ಹುದ್ದೆಗಳು ತಾತ್ಕಾಲಿಕವಾಗಿದ್ದು ಮಾರ್ಚ್ 2024ರಲ್ಲಿ ಅಂತ್ಯಗೊಳ್ಳಲಿದೆ. ಫಿಜಿಯೋಥೆರಪಿಸ್ಟ್ ಹುದ್ದೆಗೆ ಬಿಪಿಟಿ ಹೊಂದಿರಬೇಕು ಮಾಸಿಕ ₹ 12 ಸಾವಿರ ಹಾಗೂ ಆಯಾಗಳಿಗೆ ಮಾಸಿಕ ₹6 ಸಾವಿರ ಗೌರವಧನ ನೀಡಲಾಗುವುದು. ಕನಿಷ್ಠ ಎಸ್ಸೆಸ್ಸೆಲ್ಸಿ ಓದಿರಬೇಕು ಆಸಕ್ತರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಥವಾ ಪದನಿಮಿತ್ತ ತಾಲ್ಲೂಕು ಯೋಜನಾ ಸಮನ್ವಯ ಅಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಿಕ್ಷಣ ಇಲಾಖೆ ತಿ.ನರಸೀಪುರ, ಇಲ್ಲಿಗೆ ಜುಲೈ 31ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.