ತೋಟಗಾರಿಕೆ ಇಲಾಖೆ: ಅರ್ಜಿ ಆಹ್ವಾನ ನವಲಗುಂದ: ತಾಲ್ಲೂಕಿನ ತೋಟಗಾರಿಕೆ ಇಲಾಖೆ ಬೆಳೆಗಾರರಿಗೆ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ () ಯೋಜನೆ ಅಡಿಯಲ್ಲಿ ತರಕಾರಿ, ಹೂ (ಸುಗಂಧರಾಜ, ಸೇವಂತಿಗೆ) ಹೊಸ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕ, ಕೊಯ್ಲೋತ್ತರ ನಿರ್ವಹಣೆಯಡಿ ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕ ಮತ್ತು ತಳುವ ಗಾಡಿಗೆ ಸಹಾಯಧನ ಸೇರಿದಂತೆ ಮುಂತಾದ ಸೌಲಭ್ಯಗಳಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಬಹುದಾಗಿದೆ/ ಅರ್ಜಿ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನವಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ಸಂಜೀವಕುಮಾರ ಗುಡಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.