: ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆ ಮಾ.15 ಕೊನೆ ದಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್‌, ಸೀನಿಯರ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಹುದ್ದೆಗಳನ್ನು ನೇಮಕ ಮಾಡಲಾಗುವುದು. ಹುದ್ದೆಗಳ ಸಂಖ್ಯೆ: 8 ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಅನುಭವ ಕಡ್ಡಾಯ. ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಆಯ್ಕೆ ಪ‍್ರಕ್ರಿಯೆ: ಆನ್‌ಲೈನ್ ಲಿಖಿತ ‍ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15–03-2023 ಹೆಚ್ಚಿನ ಮಾಹಿತಿಗೆ: ://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.