2023 | ಕೆಪಿಎಸ್ಸಿಯಲ್ಲಿ 242 ಲೆಕ್ಕ ಸಹಾಯಕ ಹುದ್ದೆಗಳು ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‌ಸಿ) ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ 242 ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾ. 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಏಪ್ರಿಲ್ 23 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹600, ಪ್ರವರ್ಗ 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50, ಎಸ್‌ಸಿ, ಎಸ್‌ಟಿ, ಪ್ರ.ವ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ವಿದ್ಯಾರ್ಹತೆ, ಹುದ್ದೆಗಳ ಭರ್ತಿಗಾಗಿ ನಡೆಯುವ ಆಯ್ಕೆ ಪ್ರಕ್ರಿಯೆ ಸೇರಿದಂತೆ, ಹೆಚ್ಚಿನ ಮಾಹಿತಿಗಾಗಿ ://.../%20Assistant%20242%20RPC. ಲಿಂಕ್ ನೋಡಿ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.