ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಕಾರ್ಯಕ್ರಮ ಸಹಾಯಕರಿಗೆ ಅರ್ಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರವ ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಹುದ್ದೆ ಹೆಸರು: ರಾಜ್ಯಮಟ್ಟದ ಕಾರ್ಯಕ್ರಮ ಸಹಾಯಕರು ವಿದ್ಯಾರ್ಹತೆ: ಸಮಾಜ ವಿಜ್ಞಾನ / ಸಮಾಜ ಕಾರ್ಯ / ಗ್ರಾಮೀಣ ನಿರ್ವಹಣೆ ವಿಷಯಗಳಲ್ಲಿ ಪದವಿ ಪಡೆದಿರಬೇಕು. ವೇತನ: ಮಾಸಿಕ ₹25,000 ನೀಡಲಾಗುವುದು. ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಸ್ವ ವಿವರ ಇರುವ ಅರ್ಜಿಯನ್ನು ಎಲ್ಲಾ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು. ಅರ್ಜಿ ಸಲ್ಲಿಕೆ ಕಡೆ ದಿನ: 15-07-2022 ಅರ್ಜಿ ಸಲ್ಲಿಸಬೇಕಾದ ವಿಳಾಸ : ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ || ಬಿ ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001. ಹೆಚ್ಚಿನ ಮಾಹಿತಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್‌ಸೈಟ್‌ ನೋಡಿ ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.