ಬ್ಯಾಂಕ್‌: 226 ಅಧಿಕಾರಿ ಹುದ್ದೆಗಳಿಗೆ ಅರ್ಜಿ; ಪದವಿ ವಿದ್ಯಾರ್ಹತೆ ಭಾರತದಾದ್ಯಂತ ವಿಸ್ತೃತ ಶಾಖೆಗಳನ್ನು ಹೊಂದಿರುವ ಪ್ರಮುಖ ಖಾಸಗಿ ವಲಯದ ಐಡಿಬಿಐ ಬ್ಯಾಂಕ್ ತನ್ನ ಶಾಖೆಗಳು ಮತ್ತು ಕಚೇರಿಗಳಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ (ವಿವಿಧ ವೃಂದದ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 226 ವಿದ್ಯಾರ್ಹತೆ:ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ‌/ಬಿ.ಟೆಕ್ / ಬಿಇ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.. ಹೆಚ್ಚಿನ ಮಾಹಿತಿಗೆ ಈ ಕೆಳಗೆ ಅಧಿಸೂಚನೆಯ ಲಿಂಕ್ ನೀಡಿದೆ ಗಮನಿಸಬಹುದು. ವೇತನ ಶ್ರೇಣಿ:ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36,700–₹64,000 ವೇತನ ಪಡೆಯಬಹುದು. ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 40 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು. ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ₹ 200. ಇತರೆ ಅಭ್ಯರ್ಥಿಗಳಿಗೆ ₹ 1000 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ನೇಮಕಾತಿ ಪ್ರಕ್ರಿಯೆ:ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು. ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌://../idbiscomay22/ ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2022ರ ಜುಲೈ 10 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‌ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಅಧಿಸೂಚನೆ ಲಿಂಕ್‌:://../idbiscomay22//.?=k7m5p+fQ15exvs3c1MzU18rfnJd9sc/KYaao1bWrpok=&=zbfErOXWx9yxydnmj9nJ0A==#=0&=0 ವೆಬ್‌ಸೈಟ್‌: ://../idbiscomay22/ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.