| ಎಫ್‌ಡಿಎ ಹುದ್ದೆಗಳ ದಾಖಲೆಗಳ ಪರಿಶೀಲನೆ: ಇಲ್ಲಿದೆ ಮಾಹಿತಿ... ಕರ್ನಾಟಕ ಲೋಕಸೇವಾ ಆಯೋಗವು () ಆರೋಗ್ಯ ಇಲಾಖೆಯಲ್ಲಿ ಖಾಲಿ ಇದ್ದ 176 ಎಫ್‌ಡಿಎ ಹುದ್ದೆಗಳ ನೇಮಕಾತಿಯ ದಾಖಲೆಗಳ ಪರಿಶೀಲನೆ ಮಾಡಲು ದಿನಾಂಕ ನಿಗದಿಪಡಿಸಿದೆ. ಎಫ್‌ಡಿಎ ಹುದ್ದೆಗೆ ನೇಮಕಾತಿ ಮಾಡುವ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳು, ಪ್ರಮಾಣ ಪತ್ರಗಳನ್ನು ಪರಿಶೀಲನೆ ನಡೆಸಲಾಗುವುದು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು, ದಾಖಲಾತಿ ಪರಿಶೀಲನೆಗೆ ಕರೆ ಬಂದವರು ಈ ಕೆಳಗೆ ನೀಡಿರುವ ವಿಳಾಸಕ್ಕೆ ಹಾಜರಾಗಿ ದಾಖಲಾತಿ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಆಯೋಗ ತಿಳಿಸಿದೆ. ದಾಖಲೆ ಪರಿಶೀಲನೆ ದಿನಾಂಕ : 18-08-2022 ಸ್ಥಳ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆ ಸೆಮಿನಾರ್ ಹಾಲ್, ಕುಷ್ಠರೋಗ ಆಸ್ಪತ್ರೆ ಆವರಣ, ಮಾಗಡಿ ರಸ್ತೆ, ಬೆಂಗಳೂರು. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.