1,242 ಹುದ್ದೆಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪಟ್ಟಿ ಪ್ರಕಟ ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದವರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಮಾರ್ಚ್‌ 12ರಿಂದ 16ರವರೆಗೆ 26 ವಿವಿಧ ವಿಷಯಗಳಿಗೆ ನಡೆದಿತ್ತು.ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ವಿಷಯವಾರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ ಮೂಲಕ ನೋಡಬಹುದು. ಅಧಿಕೃತ ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.