ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಬ್ಯಾಂಕ್‌: 200 ಹುದ್ದೆಗಳಿಗೆ ಅರ್ಜಿ ವಿಜಯಪುರದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ನಲ್ಲಿ ( ) 200ಕ್ಕೂ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 1) ಪ್ರೊಕ್ಯೂರ್‌ಮೆಂಟ್ ಸಹಾಯಕರು–100 2) ಸಹಾಯಕರು–50 3) ಮ್ಯಾನೇಜರ್–50 ಅಭ್ಯರ್ಥಿಗಳು ಹುದ್ದೆವಾರು ವಿದ್ಯಾರ್ಹತೆ ಪಡೆದಿರಬೇಕು.ಬಿ.ಕಾಂ, ಬಿಬಿಎ, ಯಾವುದೇ ಪದವಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ಅರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ 38 ವರ್ಷ ವಯಸ್ಸು ಮೀರಿರಬಾರದು. ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ರಾಜ್ಯ ಸರ್ಕಾರದ ಅನ್ವಯ ವರ್ಗಾವಾರು ವಯೋಮಿತಿ ಸಡಿಲಿಕೆ ಇರಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ಬ್ಯಾಂಕ್‌ ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15, 2022 ಆಗಿದೆ. ಹೆಚ್ಚಿನ ಮಾಹಿತಿಗೆ ಈ ದೂರವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು: 7022260202, 08288-234219 ಇಮೇಲ್ ವಿಳಾಸ: @. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.