: 38 ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)ನಲ್ಲಿ 38 ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7–7–2022 ಹುದ್ದೆ ಹೆಸರು: ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ (ಸ್ಟೆನೋ) ಒಟ್ಟು ಹುದ್ದೆ: 38 ವೇತನ ಶ್ರೇಣಿ: ₹ 29000-93200/- ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 25 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ( ಐಚ್ಛಿಕಮಾತ್ರ:ಟೈಪಿಂಗ್‌ ಪರೀಕ್ಷೆಯಲ್ಲಿ ಪಾಸಾಗಿರಬೇಕು) ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಕಡೆ ದಿನ:7–7–2022 ಹೆಚ್ಚಿನ ಮಾಹಿತಿಗೆ ://.. ವೆಬ್‌ಸೈಟ್ ಸಂಪರ್ಕಿಸಿ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.