ಭಾರತೀಯ ನೌಕಾಪಡೆ: 338 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ; ವಿದ್ಯಾರ್ಹತೆ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್‌ ಟ್ರೇಡ್ಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 338 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ವಿವರ: 338 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2001 ರ ಆಗಸ್ಟ್‌ 01 ರಿಂದ 2008 ರ ಅಕ್ಟೋಬರ್ 31 ರ ನಡುವೆ ಜನಿಸಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ನೇಮಕಾತಿ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಐಟಿಐ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್‌ ಮಾಡಿ ನೇಮಕಾತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-07-2022 ವೆಬ್‌ಸೈಟ್: ://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.