ವೇತನ ₹25,500: ವಿದ್ಯಾರ್ಹತೆ; 853 ಕಾನ್‌ಸ್ಟೆಬಲ್‌ ನೇಮಕಾತಿಗೆ ಅರ್ಜಿ ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಹೆಡ್‌ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್‌ (ಎಸ್‌ಎಸ್‌ಸಿ) ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಿದೆ. ಹುದ್ದೆಗಳ ವಿವರ: 853 ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೇತನ ಶ್ರೇಣಿ: ಮಾಸಿಕ ₹ 25,500 – ₹ 81,100 (ವಿವಿಧ ಭತ್ಯೆಗಳು ಸೇರಿದಂತೆ) ವಯಸ್ಸು: ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿ ಸಡಿಲಿಕೆ: ಜೂನ್‌ 2022ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 25 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ನೇಮಕಾತಿ ವಿಧಾನ: ದೈಹಿಕ ಪರೀಕ್ಷೆ ಹಾಗೂ ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹ 100. ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ ://.. ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ:16-06-2022 ವೆಬ್‌ಸೈಟ್‌: ://../ ಅಧಿಸೂಚನೆ:://..////notice_HCDP_17052022. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.