ಕರ್ನಾಟಕ ಹೈಕೋರ್ಟ್‌: 54 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಬೆಂಗಳೂರು: ಹೈಕೋರ್ಟ್‌ನಲ್ಲಿ ಖಾಲಿ ಇರುವ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀಣರಾಗಿರಬೇಕು. ಹಾಗೂ ಡಿಪ್ಲೊಮಾ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಪದವಿ ಪಡೆದ ಅಭ್ಯರ್ಥಿಗಳಿಗೂ ಆದ್ಯತೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ವರ್ಷ ದಾಟಿರಬೇಕು, 35 ವರ್ಷ ಮೀರಿರ ಬಾರದು. ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ಇತರೆ ಹಿಂದುಳಿದ ವರ್ಗ ಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇರಲಿದೆ. ಇದನ್ನೂ ಓದಿ: : 136 ಎಂಜಿನಿಯರಿಂಗ್‌ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಈ ಸಂಬಂಧದ ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವೆಬ್‌ಸೈಟ್‌ ವೀಕ್ಷಿಸಬಹುದು. ಅರ್ಜಿ ಸಲ್ಲಿಕೆ ಕಡೆಯ ದಿನಾಂಕ: 07–04–2022 ವೆಬ್‌ಸೈಟ್‌: ://...///. ಇದನ್ನೂ ಓದಿ: : 105 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.