ಕರ್ನಾಟಕ ಸರ್ಕಾರ | ಪೊಲೀಸ್‌ ಇಲಾಖೆಯಲ್ಲಿ ಗ್ರೂಪ್‌ ’ಎ‘ ಹುದ್ದೆಗಳಿಗೆ ಅರ್ಜಿ ರಾಜ್ಯದ ಪೊಲೀಸ್‌ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಗ್ರೂಪ್‌ 'ಎ' ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ನಡೆಸಲಿದೆ. ಹುದ್ದೆಗಳ ಸಂಖ್ಯೆ: 10 ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಯಲ್ಲಿ ಉತ್ತೀಣರಾಗಿರಬೇಕು. ವಿವರವಾದ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ಅನುಭವ: ಸದರಿ ಹುದ್ದೆಗಳಿಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅನುಭವಗಳನ್ನು ನಿಗದಿಪಡಿಸಿದಲಾಗಿದೆ. ಅನುಭವ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ ಸೈಟ್‌ ನೋಡುವುದು. ವಯಸ್ಸು: ಕನಿಷ್ಠ–18, ಗರಿಷ್ಠ–35. ಸರ್ಕಾರದ ನಿಯಮಗಳ ಅನ್ವಯ ಮಯೋಮಿತಿಯಲ್ಲಿ ಸಡಿಲಿಕೆ ಇದೆ. ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹ 600. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹ 300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹ 50. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಕೆಪಿಎಸ್‌ಸಿವೆಬ್‌ಸೈಟ್ ನೋಡುವುದು. ಇದನ್ನೂ ಓದಿ: : 105 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 18-04-2022 ವೆಬ್‌ಸೈಟ್‌:://.... ಇದನ್ನೂ ಓದಿ: : 136 ಎಂಜಿನಿಯರಿಂಗ್‌ ಹುದ್ದೆಗಳಿಗೆ ಅರ್ಜಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.