ಉದ್ಯೋಗವಾರ್ತೆ: ಎಸ್‌ಬಿಐನಲ್ಲಿ 48 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಎಸ್‌ಬಿಐನಲ್ಲಿ ಹುದ್ದೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆ: 48 ಸ್ಥಳ: ಬೆಂಗಳೂರು ಹಾಗೂ ಮುಂಬೈ ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆದಿರಬೇಕು. ವಯೋಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗೆ ಗರಿಷ್ಠ 40 ವರ್ಷ ಮೀರಿರಬಾರದು. ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ ₹750, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 25, 2022 ಹೆಚ್ಚಿನ ಮಾಹಿತಿಗೆ: .. ಗಡಿ ಭದ್ರತಾ ಪಡೆಯಲ್ಲಿ ಹುದ್ದೆಗಳು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಕಾನ್‌ಸ್ಟೇಬಲ್‌ (ಜನರಲ್ ಡ್ಯೂಟಿ) ಹುದ್ದೆಗಳ ಸಂಖ್ಯೆ: 2788 ಸ್ಥಳ: ದೇಶದೆಲ್ಲೆಡೆ ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ, ಮಾಜಿ ಯೋಧರಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಪ್ರಕ್ರಿಯೆ: ದಾಖಲಿ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ. ಅರ್ಜಿ ಶುಲ್ಕ: ಇಲ್ಲ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 1, 2022 ಹೆಚ್ಚಿನ ಮಾಹಿತಿಗೆ: ://.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.