| ಕೃಷಿ, ಶಿಕ್ಷಣ, ಜಲ ಸಂಪನ್ಮೂಲ ಇಲಾಖೆ: ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ ಕರ್ನಾಟಕ ಲೋಕಸೇವಾ ಆಯೋಗವು() ಕೃಷಿ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಗ್ರಂಥಾಲಯ ಇಲಾಖೆ, ಜಲ ಸಂಪನ್ಮೂಲ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ ಸದರಿ ಹುದ್ದೆಗಳಿಗೆ 2017 ರಿಂದ 2020ರ ನಡುವಿನಲ್ಲಿ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು, ಸಂದರ್ಶನ ಎದುರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಹೆಸರು, ರಿಜಿಸ್ಟರ್‌ ಸಂಖ್ಯೆಯ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳು, ಸಂದರ್ಶನದ ಅಂಕಗಳನ್ನು ಸಹ ಚೆಕ್‌ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.