ರಾಜ್ಯ ಕೈಗಾರಿಕಾ ಭದ್ರತಾ ಪಡೆ: 63 ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ () ಖಾಲಿ ಇರುವ ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 63 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ಸಂಖ್ಯೆ: 63 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಹುದ್ದೆಗಳಿಗೆ ಅನುಸಾರ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳು ಅರ್ಜಿಯನ್ನು ರಾಜ್ಯ ಪೊಲೀಸ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03–03–2022 ವೆಬ್‌ಸೈಟ್: ://ksisfsi21.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.