| ಭಾರತೀಯ ಅರಣ್ಯ ಸೇವೆ: ಪ್ರವೇಶ ಪತ್ರ ಬಿಡುಗಡೆ ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಭಾರತೀಯ ಅರಣ್ಯ ಸೇವೆಗಳ (ಐಎಫ್‌ಎಸ್‌)ಮುಖ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನುಬಿಡುಗಡೆ ಮಾಡಿದೆ. ಈ ಹಿಂದೆ ಪೂರ್ವಭಾವಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ ಮೂಲಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯ ಪರೀಕ್ಷೆಯು 2022 ರ ಫೆಬ್ರುವರಿ 27 ರಿಂದ ಮಾರ್ಚ್‌ 06 ರವರೆಗೆ ನಡೆಯಲಿದೆ. ಒಟ್ಟು 7 ದಿನಗಳ ಕಾಲ ಪರೀಕ್ಷೆ ಜರುಗಲಿದೆ. ಮುಖ್ಯ ಪರೀಕ್ಷೆಯಲ್ಲಿ ಒಟ್ಟು 16 ವಿಷಯಗಳ 31 ಪ್ರಶ್ನೆ ಪತ್ರಿಕೆಗಳಿರುತ್ತವೆ. ಕೇಂದ್ರ ಆಡಳಿತಾತ್ಮಕ ಸೇವೆಯ (ಐಎಎಸ್., ಐಪಿಎಸ್‌, ಮತ್ತು ಐಎಫ್‌ಎಸ್‌) ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಆಯೋಗ ಮೂರು ಹಂತಗಳಲ್ಲಿ ಅಂದರೆ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಲಿದೆ. ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.