SBIನಲ್ಲಿ 48 ಮ್ಯಾನೇಜರ್‌ಗಳ ನೇಮಕಾತಿ: ಅರ್ಜಿ ಸಲ್ಲಿಕೆ ಫೆ. 25 ಕೊನೆ ದಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ನೆಟ್‌ವರ್ಕ್‌ ಸೆಕ್ಯೂರಿಟಿ ಸ್ಪೆಷಲಿಸ್ಟ್ ಹಾಗೂ ರೌಟಿಂಗ್ ಮತ್ತು ಸ್ವಿಚಿಂಗ್ ವಿಭಾಗಗಳಲ್ಲಿ ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳನ್ನು ನೇಮಕ ಮಾಡಲಾಗುವುದು. ಹುದ್ದೆಗಳ ಸಂಖ್ಯೆ: 48 ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಹೂ ಸಂಬಂಧಿತ ಕ್ಷೇತ್ರಗಳಲ್ಲಿ ಮೂರು ವರ್ಷ ಅನುಭವ ಕಡ್ಡಾಯ. ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. (ಜನವರಿ , 2022ಕ್ಕೆ ಅನ್ವಯವಾಗುವಂತೆ). ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ₹ 750. ಎಸ್‌ಸಿ/ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ‍್ರಕ್ರಿಯೆ: ಆನ್‌ಲೈನ್ ಲಿಖಿತ ‍ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-02-2022 ಹೆಚ್ಚಿನ ಮಾಹಿತಿಗೆ: ://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.