ಮಂಡ್ಯ ಹಾಲು ಉತ್ಪಾದಕರ ಒಕ್ಕೂಟ: 187 ಹುದ್ದೆಗಳಿಗೆ ಅರ್ಜಿ ಬೆಂಗಳೂರು: ಮಂಡ್ಯ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 187ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹುದ್ದೆಗಳ ವಿವರ: 187 ವಿವಿಧ ಹುದ್ದೆಗಳು ಸಹಾಯಕ ವ್ಯವಸ್ಥಾಪಕ, ಡೇರಿ ಮೇಲ್ವಿಚಾರಕ, ಆಡಳಿತ ಸಹಾಯಕ, ಲೆಕ್ಕ ಸಹಾಯಕ, ಕಿರಿಯ ತಾಂತ್ರಿಕ, ಕೆಮಿಸ್ಟ್‌ ಅಧಿಕಾರಿ, ಮಾರುಕಟ್ಟೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ವಿದ್ಯಾರ್ಹತೆ ಹಾಗೂ ವೇತನ: ಸಂಬಂಧಿತ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಅಧಿಸೂಚನೆಯನ್ನು ನೋಡುವುದು. ವಯಸ್ಸು ಸಾಮಾನ್ಯ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 35 ಒಬಿಸಿ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 38 ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 40 ನೇಮಕಾತಿ ವಿಧಾನ ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಕನ್ನಡ ಭಾಷೆ, ಇಂಗ್ಲಿಷ್‌, ಸಾಮಾನ್ಯ ಜ್ಞಾನ, ಸಹಕಾರ, ಸಹಕಾರಿ ಕಾನೂನು, ಭಾರತೀಯ ಸಂವಿಧಾನ, ಕಂಪ್ಯೂಟರ್‌, ಹಾಲು ಒಕ್ಕೂಟಕೆ ಸಂಬಂಧಿಸಿದ ವಿಷಯಗಳ ಮೇಲಿನ ಪ್ರಶ್ನೆಪತ್ರಿಕೆಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು, ಒಕ್ಕೂಟದ ಅಧಿಕೃತ ವೆಬ್‌ಸೈಟ್‌ ಮೂಲಕವೇ ಅರ್ಜಿಯನ್ನು ಭರ್ತಿ ಮಾಡಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 01–02–2022 ಅರ್ಜಿ ಸಲ್ಲಿಕೆ ಕಡೆ ದಿನಾಂಕ: 01–03–2022 ಒಕ್ಕೂಟದ ಅಧಿಕೃತ ವೆಬ್‌ ಸೈಟ್‌: ://./-2022/ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.