ತುಮಕೂರು | ರಾಷ್ಟ್ರೀಯ ಆರೋಗ್ಯ ಅಭಿಯಾನ: ವೈದ್ಯರು, ನರ್ಸ್‌ ಹುದ್ದೆಗಳಿಗೆ ಅರ್ಜಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಕರೆಯಲಾಗಿದೆ. ವೈದ್ಯಾಧಿಕಾರಿಗಳು, ವೈದ್ಯರು, ಆಪ್ತಸಮಾಲೋಚಕರು, ಮೇಲ್ವಿಚಾರಕರು, ನರ್ಸ್‌ಗಳು, ಸಹಾಯಕಿಯರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ವೇತನ ನೀಡಲಾಗುವುದು. ಮೆರಿಟ್ ಕಂ ರೋಸ್ಟರ್ ಅನ್ವಯ ನೇಮಕಾತಿ ಮಾಡಲಾಗುತ್ತದೆ. ಸಂದರ್ಶನ ದಿನಾಂಕ : 27-01-2022 ಸಂದರ್ಶನ ಸ್ಥಳ : ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಗಳ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಗಳ ಸಂಕೀರ್ಣ, ಅಮಾನಿಕೆರೆ ಮುಂಭಾಗ, ತುಮಕೂರು. ಹೆಚ್ಚಿನ ಮಾಹಿತಿಗಾಗಿ ಈ ಅಧಿಸೂಚನೆ ಲಿಂಕ್‌ ಕ್ಲಿಕ್ಕಿಸಿ ನೊಡಬಹುದು. ಅದಿಸೂಚನೆ: ://...////-. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.