ಕರ್ನಾಟಕ ಭವನ: ವಿವಿಧ ಹುದ್ದೆಗಳ ತಾತ್ಕಾಲಿಕ ಪಟ್ಟಿ, ಕಟ್‌ಆಫ್‌ ಅಂಕ ಬಿಡುಗಡೆ ಕರ್ನಾಟಕ ಲೋಕಸೇವಾ ಆಯೋಗವು() ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿ ಇದ್ದ ಹುದ್ದೆಗಳ ನೇಮಕಾತಿಯ ತಾತ್ಕಲಿಕ ಆಯ್ಕೆಪಟ್ಟಿ ಹಾಗೂ ಕಟ್‌ ಆಫ್‌ ಅಂಕಗಳನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಿಗೆ 2020ರ ಅವಧಿಯಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಈ ಹುದ್ದೆಗಳ ತಾತ್ಕಲಿಕ ಆಯ್ಕೆಪಟ್ಟಿ ಹಾಗೂ ಕಟ್‌ ಆಫ್‌ ಅಂಕಗಳನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನ ಎದುರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಅಭ್ಯರ್ಥಿಗಳು ತಮ್ಮ ಹೆಸರು, ರಿಜಿಸ್ಟರ್‌ ಸಂಖ್ಯೆಯ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳು, ಸಂದರ್ಶನದ ಅಂಕಗಳನ್ನು ಸಹ ಚೆಕ್‌ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.