: 198 ಮ್ಯಾನೇಜ್‌ಮೆಂಟ್‌ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ದೇಶದಾದ್ಯಂತ ಬ್ಯಾಂಕ್‌ ಆಫ್ ಬರೋಡಾದ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ವಿವಿಧ ಮ್ಯಾನೇಜ್‌ಮೆಂಟ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು: ವಿವಿಧ ಮ್ಯಾನೇಜ್‌ಮೆಂಟ್‌ ಹುದ್ದೆಗಳು ಹುದ್ದೆಗಳ ಸಂಖ್ಯೆ: 198 ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36,700 ವೇತನ ಪಡೆಯಬಹುದು. ವಯಸ್ಸು: ಕನಿಷ್ಠ 21 ವರ್ಷಗಳು, ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು. ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ₹ 100. ಇತರೆ ಅಭ್ಯರ್ಥಿಗಳಿಗೆ ₹ 600 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು. ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ ://../ ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2022ರ ಫೆಬ್ರುವರಿ 01 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‌ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಓದಿ:ತರಬೇತಿ ಭತ್ಯೆ ₹ 14,000 | : 626 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ವೆಬ್‌ಸೈಟ್‌: ://.. ಓದಿ:ಕೇಂದ್ರ ರೈಲ್ವೆ: , ವಿದ್ಯಾರ್ಹತೆ; 2422 ಅಪ್ರೆಂಟಿಸ್‌ ಹುದ್ದೆಗಳು ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.