ಭಾರತ ಸರ್ಕಾರ | : ಗ್ರೂಪ್‌ ಸಿ, ಡಿ ಹುದ್ದೆಗಳ ಪರೀಕ್ಷೆಯ ಫಲಿತಾಂಶ ಪ್ರಕಟ ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿ ಕಾರ್ಯನಿರ್ವಹಿಸುವ ಸ್ಟ್ಯಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) 2020ರ ಸ್ಟೆನೋಗ್ರಾಫರ್‌ ಹಾಗೂ ಗ್ರೇಡ್‌ ಸಿ, ಡಿ ಹುದ್ದೆಗಳ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಪಡೆಯನಹುದು ಎಂದು ಎಸ್‌ಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷೆಯು ನವೆಂಬರ್‌ (2020) 11ರಿಂದ 15ರವರೆಗೆ ದೇಶದ ನಾನಾ ಭಾಗಗಳಲ್ಲಿ ನಡೆದಿತ್ತು. ಕೇಂದ್ರ ಸರ್ಕಾರದ ವಿವಿಧ ಇಲಾಖೆ ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಈ ಪರೀಕ್ಷೆ ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. 30ಕ್ಕೂ ಹೆಚ್ಚು ವಿಭಾಗಗಳಲ್ಲಿ ಗ್ರೂಪ್‌ ಬಿ ಮತ್ತು ಸಿ ವರ್ಗಗಳ ಹಲವು ಹುದ್ದೆಗಳು ಖಾಲಿ ಇದ್ದವು. ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ನೋಡಿ: ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.