ಬ್ಯಾಂಕ್‌: 715 ವಿವಿಧ ಹುದ್ದೆಗಳಿಗೆ ಅರ್ಜಿ, ಜನವರಿ 17 ಕಡೆ ದಿನ ಒಡಿಶಾ ಸ್ಟೇಟ್‌ ಸೆಂಟ್ರಲ್‌ ಬ್ಯಾಂಕ್‌() ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 715 ಹುದ್ದೆಗಳು ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಬ್ಯಾಂಕ್‌ ಹೊರಡಿಸಿರುವ ಅಧಿಸೂಚನೆಯನ್ನು ನೋಡುವುದು. ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2022ರ ಜನವರಿ 17 ಕೊನೆ ದಿನವಾಗಿದೆ. ವೆಬ್‌ಸೈಟ್‌: ://../oscbasmdec21 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.