ಏರ್‌ ಇಂಡಿಯಾ ಟ್ರಾನ್ಸ್‌ಪೋರ್ಟ್‌: 604 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ ()ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ಹುದ್ದೆಗಳ ಸಂಖ್ಯೆ: 604 ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್ಎಲ್‌ಸಿ/ ಐಟಿಐ/ ಡಿಪ್ಲೊಮಾ/ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ನೋಡುವುದು. ವಯೋಮಿತಿ: ಸದರಿ ಹುದ್ದೆಗಳಿಗೆ 28 ವರ್ಷ ವಯೋಮಿತಿ ಇರಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್‌ 22, 2022 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ( ನೇರ ಸಂದರ್ಶನ ಇರಲಿದೆ) ಹೆಚ್ಚಿನ ಮಾಹಿತಿಗೆ: ://../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.