: ಐಟಿಐ, ಡಿಪ್ಲೊಮಾ ಮಾಡಿದರಿಗೆ 91 ಟೆಕ್ನಿಷಿಯನ್‌ ಹುದ್ದೆಗಳಿಗೆ ಅರ್ಜಿ ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಟೆಕ್ನಿಷಿಯನ್‌/ ಸಹಾಯಕರು ಹುದ್ದೆಗಳ ಸಂಖ್ಯೆ: 91 ಸ್ಥಳ: ಬೆಂಗಳೂರು ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ, ಡಿಪ್ಲೊಮಾ ಹಾಗೂ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು ವಯೋಮಿತಿ: ಸದರಿ ಹುದ್ದೆಗಳಿಗೆ 28 ವರ್ಷ ವಯೋಮಿತಿ ಇರಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ. ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 250, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್‌ 20, 2022 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ಹೆಚ್ಚಿನ ಮಾಹಿತಿಗೆ: ://-. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.