| ಭಾರತೀಯ ಅರಣ್ಯ ಸೇವೆ: ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ ನವದೆಹಲಿ:ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಭಾರತೀಯ ಅರಣ್ಯ ಸೇವೆಗಳ (ಐಎಫ್‌ಎಸ್‌)ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಹಿಂದೆ ಪೂರ್ವಭಾವಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆದಿದ್ದರು. ಅವರು ವೇಳಾಪಟ್ಟಿ ನೋಡಬಹುದು. ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ ಮೂಲಕ ಫಲಿತಾಂಶ ಪಡೆಯಬಹುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯ ಪರೀಕ್ಷೆಯು 2022 ರ ಫೆಬ್ರುವರಿ 27 ರಿಂದ ಮಾರ್ಚ್‌ 06 ರವರೆಗೆ ನಡೆದಿತ್ತು. ಒಟ್ಟು 7 ದಿನಗಳ ಕಾಲ ಪರೀಕ್ಷೆ ಜರುಗಿತ್ತು. ಐಎಫ್‌ಎಸ್‌ ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಂದಿನ ಸಂದರ್ಶನ ಹಂತಕ್ಕೆ ಹೋಗುತ್ತಾರೆ. ಈ ಹಂತದಲ್ಲಿ ಶೈಕ್ಷಣಿಕ ದಾಖಲೆಗಳು, ಜಾತಿ ಪ್ರಮಾಣ ಪತ್ರ, ಮೀಸಲಾತಿ ಕೋರುವ ಪ್ರಮಾಣ ಪತ್ರ, ಇತರೆ ದಾಖಲೆಗಳನ್ನು ಸಲ್ಲಿಸಬೇಕು. ವೆಬ್‌ಸೈಟ್‌:://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.