: ಸಿಎಂಎಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ ನವದೆಹಲಿ: ಕಂಬೈನ್ಡ್‌ ಮೆಡಿಕಲ್ ಸರ್ವೀಸ್‌ (ಸಿಎಂಎಸ್‌) ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಿದೆ. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಫಲಿತಾಂಶ ನೋಡಬಹುದು. ಯುಪಿಎಸ್‌ಸಿಯು ನವೆಂಬರ್‌ 21ರಂದು ಸಿಎಂಎಸ್‌ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ .. ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತಾರೆ. ಮುಂದಿನ ಹಂತದಲ್ಲಿ ಸಂದರ್ಶನ ನಡೆಯಲಿವೆ. ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ನೋಡಿ: ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.