: ಎಂಜಿನಿಯರ್‌, ಶಿಕ್ಷಕರು, ಸಹಾಯಕ ನಿರ್ದೇಶಕರ ಆಯ್ಕೆಪಟ್ಟಿ ಬಿಡುಗಡೆ ಕರ್ನಾಟಕ ಲೋಕಸೇವಾ ಆಯೋಗವು() ಪೌರಾಡಳಿತ ನಿರ್ದೇಶನಾಲಯದ ಪರಿಸರ ಎಂಜಿನಿಯರ್‌, ಉರ್ದು ಶಿಕ್ಷಕರು, ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ ಸದರಿ ಹುದ್ದೆಗಳಿಗೆ 2018 (ಉರ್ದು ಶಿಕ್ಷಕರು) ಹಾಗೂ 2020ರಲ್ಲಿ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು, ಸಂದರ್ಶನ ಎದುರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಹೆಸರು, ರಿಜಿಸ್ಟರ್‌ಸಂಖ್ಯೆಯ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳು, ಸಂದರ್ಶನದ ಅಂಕಗಳನ್ನು ಸಹ ಚೆಕ್‌ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.