: 136 ಎಂಜಿನಿಯರಿಂಗ್‌ ಹುದ್ದೆಗಳಿಗೆ ಅರ್ಜಿ ಕೊಚ್ಚಿನ್‌ ಶಿಪ್‌ಯಾರ್ಡ್‌ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 136 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ಸಂಖ್ಯೆ: 136 ಹುದ್ದೆಗಳು ವಿದ್ಯಾರ್ಹತೆ: ಡಿಪ್ಲೊಮಾ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ವಯೋಮಿತಿ: ಹುದ್ದೆಗಳಿಗೆ ಅನುಸಾರ ಕೊಚ್ಚಿನ್‌ ಶಿಪ್‌ಯಾರ್ಡ್‌ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು. ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು. ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09–03–2022 ವೆಬ್‌ಸೈಟ್:://./ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.