: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಕರ್ನಾಟಕ ಲೋಕಸೇವಾ ಆಯೋಗವು () ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಿಗೆ 2018ರಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ನಡೆಸಿತ್ತು. ಈ ಹುದ್ದೆಗಳ ಆಯ್ಕೆಪಟ್ಟಿಯನ್ನು ಕೆಪಿಎಸ್‌ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು ಅಭ್ಯರ್ಥಿಗಳು ಚೆಕ್‌ ಮಾಡಿಕೊಳ್ಳಬಹುದು. ಒಟ್ಟು 24 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು, ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಅಭ್ಯರ್ಥಿಗಳು ತಮ್ಮ ಹೆಸರು, ರಿಜಿಸ್ಟರ್‌ ಸಂಖ್ಯೆಯ ಮೂಲಕ ಚೆಕ್‌ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.