: 360 ಎಂಜಿನಿಯರಿಂಗ್‌ ಹುದ್ದೆಗಳು; ಅರ್ಜಿ ಸಲ್ಲಿಕೆಗೆ ಮಾರ್ಚ್‌ 13 ಕಡೆ ದಿನ ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಬಹುದು. ಹುದ್ದೆಗಳು: ಎಂಜಿನಿಯರ್‌ ಅಪ್ರೆಂಟಿಸ್ ಹುದ್ದೆಗಳು ಹುದ್ದೆಗಳ ಸಂಖ್ಯೆ: 360 ಸ್ಥಳ: ಬೆಂಗಳೂರು ಮತ್ತು ಇತರೆ ಕಡೆ ವಿದ್ಯಾರ್ಹತೆ: ಡಿಪ್ಲೊಮಾ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ಭತ್ಯೆ: ₹15 ಸಾವಿರ ತರಬೇತಿ ಭತ್ಯೆ ನೀಡಲಾಗುವುದು. ವಯೋಮಿತಿ: ಗರಿಷ್ಠ 28 ವರ್ಷ ಮೀರಿರಬಾರದು . ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ. ಆಯ್ಕೆ ಪ್ರಕ್ರಿಯೆ: ಡಿಪ್ಲೊಮಾ ಅಥವಾ ಪದವಿಯಲ್ಲಿ ಪಡೆದ ಗರಿಷ್ಠ ಅಂಕಗಳ ಸರಾಸರಿ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ನಡೆಯುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-03-2022 ಹೆಚ್ಚಿನ ಮಾಹಿತಿಗೆ... * ://-. * ://...///user_login. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.