ವೇತನ ₹ 36,000: SBIನಲ್ಲಿ 1226 ಸಿಬಿಒ ಹುದ್ದೆಗಳಿಗೆ ಅರ್ಜಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ)ದಲ್ಲಿ ಖಾಲಿ ಇರುವ 1226 ಸರ್ಕಲ್ ಬೇಸ್ಡ್‌ ಆಫೀಸರ್ (ಸಿಬಿಒ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 278 ಹುದ್ದೆಗಳಿ ಖಾಲಿ ಇವೆ. ಹುದ್ದೆಯ ಹೆಸರು: ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳ ಸಂಖ್ಯೆ: 1226 (ಕನಾರ್ಟಕದಲ್ಲಿ 278 ಹುದ್ದೆಗಳು) ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36.000 ವೇತನ ಪಡೆಯಬಹುದು. ವಯಸ್ಸು: ಕನಿಷ್ಠ 21 ವರ್ಷಗಳು, ಗರಿಷ್ಠ 30 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು. ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ ₹ 750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಎಸ್‌ಬಿಐ ಹೊರಡಿಸಿರುವ ಅಧಿಸೂಚನೆಯನ್ನು ನೋಡುವುದು. ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ ://...// ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2021ರ ಡಿಸೆಂಬರ್‌ 29 ಕೊನೆ ದಿನವಾಗಿದೆ. ಓದಿ:ಮೂಲ ವೇತನ ₹ 35 ಸಾವಿರ: ಬಿಇಎಲ್‌ನಲ್ಲಿ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಹೆಚ್ಚಿನ ಮಾಹಿತಿಗಾಗಿ ಎಸ್‌ಬಿಐ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್‌ ನೀಡಲಾಗಿದೆ. ವೆಬ್‌ಸೈಟ್‌: ://...// ಓದಿ:ಉತ್ತರ ಕೇಂದ್ರ ರೈಲ್ವೆ | ವಿವಿಧ ಹುದ್ದೆಗಳಿಗೆ ಅರ್ಜಿ: ಡಿಸೆಂಬರ್‌ 25 ಕಡೆ ದಿನ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.