ಕೆಪಿಎಸ್‌ಸಿ: ಎಇ 660, ಜೆಇ 330 ಹುದ್ದೆಗೆ ಡಿಸೆಂಬರ್‌ 13ರಿಂದ ಪರೀಕ್ಷೆ ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ‘ಬಿ’ ವೃಂದದ ಸಹಾಯಕ ಎಂಜಿನಿಯರ್ (ಎಇ, ಗ್ರೇಡ್- 1, ಸಿವಿಲ್) 660 ಹುದ್ದೆಗಳು ಮತ್ತು ಗ್ರೂಪ್‌ 'ಸಿ' ವೃಂದದ ಕಿರಿಯ ಎಂಜಿನಿಯರ್ (ಜೆಇ, ಸಿವಿಲ್) 330 ಹುದ್ದೆಗಳಿಗೆ ನೇಮಕಾತಿಗೆ ಕೆಪಿಎಸ್‌ಸಿ ಡಿಸೆಂಬರ್‌ 13ರಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ದಿನಾಂಕವನ್ನು ಕೆಪಿಎಸ್‌ಸಿ ಪರಿಷ್ಕರಿಸಿದೆ. ಬೆಳಿಗ್ಗೆ 10ರಿಂದ 11.30ರವರೆಗೆ ಪತ್ರಿಕೆ–1 (ಸಾಮಾನ್ಯ ಪತ್ರಿಕೆ), ಮಧ್ಯಾಹ್ನ 2ರಿಂದ 4ಗಂಟೆವರೆಗೆ ಪತ್ರಿಕೆ–2 (ನಿರ್ದಿಷ್ಟ ಪತ್ರಿಕೆ)ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ. ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪರೀಕ್ಷೆ ಪತ್ರ ಬಿಡುಗಡೆಯಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ನೋಡುವುದು. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌: ://.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.