ಉದ್ಯೋಗ ವಾರ್ತೆಗಳು: ಐಐಎಸ್‌ಸಿಯಲ್ಲಿ ಹುದ್ದೆಗಳು ಐಐಎಸ್‌ಸಿಯಲ್ಲಿ ಹುದ್ದೆಗಳು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಎಲೆಕ್ಟ್ರಾನಿಕ್‌ ಸಂಪನ್ಮೂಲ ನಿರ್ವಹಣೆ, ಪ್ರಾಜೆಕ್ಟ್‌ ಟ್ರೈನಿ, ಲೈಬ್ರರಿ ಇನ್ಫರ್ಮೇಷನ್‌ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಸಂಖ್ಯೆ: 14 ಸ್ಥಳ: ಬೆಂಗಳೂರು ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ, ಬಿಟೆಕ್‌, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯೋಮಿತಿ: ಗರಿಷ್ಠ 30 ವರ್ಷ. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 14, 2021 ಹೆಚ್ಚಿನ ಮಾಹಿತಿಗೆ: ://..// *** ಕರೂರ್ ವೈಶ್ಯ ಬ್ಯಾಂಕ್‌ನಲ್ಲಿ ಹುದ್ದೆಗಳು ಕರೂರ್ ವೈಶ್ಯ ಬ್ಯಾಂಕ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50 ಅಂಕಗಳೊಂದಿಗೆ ಪದವಿ ಮುಗಿಸಿರಬೇಕು. ವಯೋಮಿತಿ: ಅಭ್ಯರ್ಥಿಗಳಿಗೆ ನವೆಂಬರ್‌ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ಆಗಿರಬೇಕು. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 31, 2021 ಹೆಚ್ಚಿನ ಮಾಹಿತಿಗೆ: ://.../ *** ಸೆಂಟ್ರಲ್ ಬ್ಯಾಂಕ್ ಆಫ್‌ಇಂಡಿಯಾದಲ್ಲಿ ಹುದ್ದೆಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2021–22 ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆ: 115 ಸ್ಥಳ: ಭಾರತದೆಲ್ಲೆಡೆ ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಬಿಟೆಕ್‌, ಎಂಎಸ್‌ಸಿ, ಸಿಎ ಹಾಗೂ ಇತ್ಯಾದಿ. ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷಗಳಾಗಿರಬೇಕು. ನೇಮಕಾತಿ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ. ಅರ್ಜಿ ಶುಲ್ಕ: ₹ 850, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ₹ 175 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 17, 2021 ಹೆಚ್ಚಿನ ಮಾಹಿತಿಗೆ: ://...// *** ಎಐಐಎಂಎಸ್‌ನಲ್ಲಿ ಹುದ್ದೆಗಳು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್‌), ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ನೇರ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. ಹುದ್ದೆ: ಜ್ಯೂನಿಯರ್ ರೆಸಿಡೆಂಟ್‌ ಹುದ್ದೆಗಳ ಸಂಖ್ಯೆ: 24 ಸ್ಥಳ: ಆಂಧ್ರಪ್ರದೇಶದ ಗುಂಟೂರು ವಿದ್ಯಾರ್ಹತೆ: ಈ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಗರಿಷ್ಠ 33 ವರ್ಷ ಮೀರಿರಬಾರದು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 1000, ಎಸ್‌ಸಿ, ಎಸ್‌ಸಿ ಅಭ್ಯರ್ಥಿಗಳಿಗೆ ₹ 500 ಹಾಗೂ ಅಂಗವಿಕಲರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನ ಸಂದರ್ಶನ ದಿನಾಂಕ: ಜನವರಿ 5, 2022 ಸಂದರ್ಶನ ನಡೆಯುವ ಸ್ಥಳ: ಧರ್ಮಶಾಲಾ ಕಟ್ಟಡ, ಏಮ್ಸ್ ಮಂಗಳಗಿರಿ ಮೇನ್ ಕ್ಯಾಂಪಸ್. ಹೆಚ್ಚಿನ ಮಾಹಿತಿಗೆ: ://...//Recruitments_new. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.