ಅರಣ್ಯ ಇಲಾಖೆ: 339 ಅರಣ್ಯ ರಕ್ಷಕ ಹುದ್ದೆಗಳ ಕೀ ಉತ್ತರಗಳು ಪ್ರಕಟ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದ ಅರಣ್ಯ ರಕ್ಷಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಸರಿಯುತ್ತರಗಳನ್ನು ಇಲಾಕೆಯು ಬಿಡುಡೆಮಾಡಿದೆ. ಅರಣ್ಯ ರಕ್ಷಕ ಹುದ್ದೆಯ ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ಕೀ ಉತ್ತರಗಳನ್ನು ನೋಡಬಹುದು. ಒಟ್ಟು 339 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಕಳೆದ ಭಾನುವಾರ ಇಲಾಖೆಯು ರಾಜ್ಯದ 11 ಸ್ಥಳಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯ ಸರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಸರಿ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ಇಲಾಖೆಯ ವೆಬ್‌ಸೈಟ್‌ನಲ್ಲಿರುವ ಇ–ಮೇಲ್‌ ವಿಳಾಸಕ್ಕೆ ಕಳುಹಿಸಲು ಸೂಚಿಸಲಾಗಿದೆ. ಓದಿ:ವಿದ್ಯಾರ್ಥಿ ವೇತನ: ಐಸಿಎಆರ್-ಐಎಆರ್‌ಐ ಸಿಎಸ್‌ಐಆರ್ ರಿಸರ್ಚ್ ಫೆಲೊಶಿಪ್ 2021 ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಇಲಾಖೆಯ ಈ ಕೆಳಗಿನ ವೆಬ್‌ವಿಳಾಸವನ್ನು ನೋಡನಹುದು. ವೆಬ್‌ಸೈಟ್‌: ://. ಓದಿ:ಉದ್ಯೋಗ ವಾರ್ತೆ: ಡಿಆರ್‌ಡಿಒದಲ್ಲಿ ಅಪ್ರೆಂಟಿಸ್ ಹುದ್ದೆಗಳು ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.